ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್ 14. ಕೊನೆಯ ದಿನ.

ಬಿಬಿಎಂಪಿಯು ಚುನಾವಣಾ ಆಯೋಗದ ನಿರ್ದೇಶನದಂತೆ ಏ.8ರಂದು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಿದೆ.

2018ರ ನಿಮ್ಮ ಇಷ್ಟದ ಸಂಪುಟವನ್ನು ಆಯ್ಕೆ ಮಾಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.14ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಏ.8 ರಂದು ಮಿಂಚಿನ ನೋಂದಣಿ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಹೆಸರು ಸೇರ್ಪಡೆ, ವರ್ಗಾವಣೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.

ಜನರು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ವರ್ಗಾವಣೆ ಅರ್ಜಿ ಸಲ್ಲಿಸಬಹುದಾಗಿದೆ.

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 8728 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಇದಲ್ಲದೇ 1400ಕ್ಕಿಂತ ಹೆಚ್ಚು ಮತದಾರರಿರುವ ಕಡೆ 806 ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಈ ಎಲ್ಲ ಮತಗಟ್ಟೆಗಳಲ್ಲಿ ಏ.8ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

 

ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತೆರೆದಿರಲಿವೆ. ನಗರದ 28ಕ್ಷೇತ್ರಗಳಲ್ಲಿ ಈವರೆಗೆ 87,98,335 ಮಂದಿ ಮತದಾರರು ನೋಂದಣಿಯಾಗಿದ್ದಾರೆ. ಈ ಪೈಕಿ 46,04, 190 ಪುರುಷರು ಮತ್ತು 41,92,706 ಮಂದಿ ಮಹಿಳಾ ಮತದಾರರಿದ್ದಾರೆ. ಈ ಬಾರಿ 3,16,467 ಮಂದಿ ಹೊಸದಾಗಿ ಮತದಾರರ ಪಟ್ಟಿ ಸೇರಿದ್ದಾರೆ.

Also Read: How To Enroll for Voter ID Online

1 COMMENT

  1. It’s an Encouraging Steps being taken by the Authorities and We, Citizens of India will abide by the Law & Vote for the ‘New India’ initiatives/ development.

LEAVE A REPLY

Please enter your comment!
Please enter your name here